ಕೃಷ್ಣ ಹೇಳುತ್ತಾನೆ “ದೇವರ್ಷೀಣಾಂ ಚ ನಾರದಃ” ಎಂದು. ನಾರದ ಗಂಧರ್ವರಲ್ಲಿ ಒಬ್ಬ. ಆದರೆ ಭಗವಂತನ ವಿಶೇಷ ಸನ್ನಿಧಾನದಿಂದ ಆತ ತುಂಬಾ ಎತ್ತರಕ್ಕೇರಿ ದೇವರ್ಷಿಯಾದ.
ನಾರದ ಭಗವಂತನನ್ನು ಪಡೆದದ್ದು ಮಹಾ ಸಾಧನೆಯಿಂದ. ಹಿಂದಿನ ಬ್ರಹ್ಮಕಲ್ಪದಲ್ಲಿ ನಾರದ ಒಂದು ಬಡ ಕುಟುಂಬದಲ್ಲಿ ಹುಟ್ಟಿದ್ದ. ಆತನ ತಾಯಿ ಋಷಿ-ಮುನಿಗಳ ಆಶ್ರಮದಲ್ಲಿ ಕೆಲಸ ಮಾಡಿಕೊಂಡು ಬದುಕುತಿದ್ದಳು.
ಪುಟ್ಟ ಮಗುವಾಗಿದ್ದ ಈತ ಋಷಿಗಳ ಅಧ್ಯಾತ್ಮ ಸಂಭಾಷಣೆಯನ್ನು ಕೇಳುತ್ತ ಬೆಳೆದ. ಈತ ಐದು ವರ್ಷದವನಿದ್ದಾಗ ಆತನ ತಾಯಿ ಹಾವು ಕಚ್ಚಿ ಸಾಯುತ್ತಾಳೆ.
ತಿಳಿದವರು ಹೇಳುವಂತೆ- “ನಮಗೆ ದೇವರೇ ‘ನಾಥ’ ಎಂದು ಗೊತ್ತು ಮಾಡಿಸಲು ಭಗವಂತ ನಮ್ಮನ್ನು ಮೊದಲು ‘ಅನಾಥ’ ಮಾಡುತ್ತಾನೆ”. ಹಾಗೆ ಅನಾಥನಾದ ಈತ ತನ್ನ ಐದನೇ ವರ್ಷದಿಂದಲೇ, ಋಷಿಗಳಿಂದ ತಿಳಿದ ಜ್ಞಾನದಿಂದ ಸಾಧನೆ ಆರಂಭಿಸುತ್ತಾನೆ.
ಆದರೆ ಆತನಿಗೆ ಆ ಜನ್ಮದಲ್ಲಿ ಭಗವಂತನ ದರ್ಶನವಾಗುವುದಿಲ್ಲ. ಆದರೆ ಆತ ಭಗವಂತನ ವಾಣಿಯನ್ನು ‘ಕೇಳಿದ’. “ಈ ಜನ್ಮದಲ್ಲಿ ನನ್ನನ್ನು ಕಾಣುವ ಪ್ರಯತ್ನ ಮಾಡಬೇಡ.
ನೀನು ಮುಂದಿನ ಕಲ್ಪದಲ್ಲಿ ಸದಾ ನನ್ನನ್ನು ಕಾಣುವೆ” ಎಂದು. ನಂತರ ಈತ ಈ ಬ್ರಹ್ಮಕಲ್ಪದಲ್ಲಿ ನಾರದನಾಗಿ ಹುಟ್ಟಿ ಭಗವಂತನ ಮಹಾ ಅನುಗ್ರಹಕ್ಕೆ ಪಾತ್ರನಾದ. ನಾರದರು ನಮ್ಮ ಅಂತಃಪ್ರಜ್ಞೆಯ ಅಭಿಮಾನಿ ದೇವತೆ.
ಹಿಂದಿನ ಕಾಲದ ಕಥೆಗಳಲ್ಲಿ ಕಾಣುವಂತೆ ಯಾವುದಾದರು ಒಳ್ಳೆಯ ಕೆಲಸವಾಗಬೇಕಾದರೆ ಅಲ್ಲಿ ನಾರದರು ಬಂದು ಹೇಳಿ ಹೋಗುತ್ತಿದ್ದರು. ಉದಾಹರಣೆಗೆ ವಾಲ್ಮೀಕಿ ರಾಮಾಯಣ ಬರೆಯುವಂತೆ ಹೇಳಿ ಹೋದವರು ನಾರದರು. ಇಲ್ಲಿ ನಮಗೆ ಒಂದು ಪ್ರಶ್ನೆ ಬರುತ್ತದೆ.
ಈಗ ಏಕೆ ನಾರದರು ಬರುವುದಿಲ್ಲ, ಏಕೆ ನಮಗೆ ಮಾರ್ಗದರ್ಶನ ಸಿಗುವುದಿಲ್ಲ ಎಂದು. ನಾರದರನ್ನು ನಾವು ಕರೆದರೆ ಖಂಡಿತ ಇವತ್ತಿಗೂ ಬರುತ್ತಾರೆ!
‘ನಾರದ’ ಅಂದರೆ ನಮ್ಮ ಅಂತರಂಗದ ಧ್ವನಿ.
-ಸಂಗ್ರಹಿತ ಮಾಹಿತಿ

Nice story
ReplyDeleteNice story
ReplyDelete